September 27, 2026

ಬಾಲಿವುಡ್ ನಟಿ ನೂರ್ ಮಾಲಾಬಿಕಾ ದಾಸ್ ಆತ್ಮಹತ್ಯೆ

0
image_editor_output_image-582671286-1718172107137.jpg

ಮುಂಬೈ: ಬಾಲಿವುಡ್ ನಟಿ ನೂರ್ ಮಾಲಾಬಿಕಾ ದಾಸ್ ಮುಂಬೈನ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

2023ರಲ್ಲಿ ಬಿಡುಗಡೆಗೊಂಡಿದ್ದ ‘ದಿ ಟ್ರಯಲ್’ ವೆಬ್ ಸರಣಿಯಲ್ಲಿ ನಟಿ ಕಾಜೋಲ್ ಜತೆ ಮಾಲಾಬಿಕಾ ದಾಸ್ ನಟಿಸಿದ್ದರು.

 

ನೂರ್ ಮಾಲಾಬಿಕಾ ಅಪಾರ್ಟ್‌ಮೆಂಟ್‌ನಿಂದ ದುರ್ವಾಸೆ ಬರುತ್ತಿದ್ದರಿಂದ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ನಟಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

31 ವರ್ಷದ ನೂರ್ ಮಾಲಾಬಿಕಾ ದಾಸ್ ಖಿನ್ನತೆಯಿಂದ ಬಳಲುತ್ತಿದ್ದರು. ಈ ಸಂಬಂಧ ಚಿಕಿತ್ಸೆಯನ್ನೂ ಪಡೆಯುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!