September 27, 2026

ದರ್ಶನ್‍ನನ್ನು ಸಿನೆಮಾ ಇಂಡಸ್ಟ್ರಿಯಿಂದಲೇ ಬ್ಯಾನ್ ಮಾಡಬೇಕು: ಮೃತ ರೇಣುಕಾಸ್ವಾಮಿಯ ತಾಯಿ ಆಕ್ರೋಶ

0
image_editor_output_image2104228114-1718177179733.jpg

ಚಿತ್ರದುರ್ಗ: ನಟ ದರ್ಶನ್‍ನನ್ನು ಸಿನಿಮಾ ಇಂಡಸ್ಟ್ರಿಯಿಂದಲೇ ಬ್ಯಾನ್ ಮಾಡಬೇಕು. ದರ್ಶನ್ ಯಾವುದೇ ಸಿನಿಮಾಗಳನ್ನ ರಿಲೀಸ್ ಮಾಡಬಾರದು ಎಂದು ಮೃತ ರೇಣುಕಾಸ್ವಾಮಿ ತಾಯಿ ರತ್ನಪ್ರಭಾ ಆಕ್ರೋಶ ಹೊರಹಾಕಿದ್ದಾರೆ.

ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಡಿಬಾಸ್ ಎಂದು ಖ್ಯಾತಿ ಪಡೆದ ದರ್ಶನ್ ಖಳನಟ ಎಂದು ಆಕ್ರೋಶ ವ್ಯಕ್ತಪಡಿಸಿದರು.

 

ದೊಡ್ಡ ಮನುಷ್ಯನ ಗುಣ ದರ್ಶನಗಿಲ್ಲ, ಅವನು ಕಳ್ಳ. ಸಿನಿಮಾ ಇಂಡಸ್ಟ್ರಿಯಿಂದಲೇ ದರ್ಶನ್ ಬ್ಯಾನ್ ಮಾಡಬೇಕು. ದರ್ಶನ್ ಯಾವುದೇ ಸಿನಿಮಾಗಳನ್ನ ರಿಲೀಸ್ ಮಾಡಬಾರದು. ಡಿ ಬಾಸ್ ಎನ್ನುವ ಅಭಿಮಾನಿಗಳ ಇವನ ಹೇಯ ಕೃತ್ಯವನ್ನು ನೋಡಿ ಕಲಿಯಲಿ. ನನ್ನ ಮಗನಿಗೆ ಆದ ಸ್ಥಿತಿಯೇ ದರ್ಶನ್ ಮಗನಿಗೆ ಆಗಬೇಕು. ಅವರ ಕುಟುಂಬವೇ ಸರ್ವನಾಶ ಆಗಬೇಕು ಎಂದು ದರ್ಶನ್ ವಿರುದ್ದ ರೇಣುಕಾಸ್ವಾಮಿ ತಾಯಿ ಆಕ್ರೋಶ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

You may have missed

error: Content is protected !!