September 20, 2024

ಉಡುಪಿ: ಸಮುದ್ರದ ಅಬ್ಬರ ಹೆಚ್ಚಳ, ಮಲ್ಪೆ ಬೀಚ್ ಪ್ರವಾಸಿಗರಿಗೆ ನಿಷೇಧ

0

ಉಡುಪಿ: ಮಳೆಗಾಲದಲ್ಲಿ ಸಮುದ್ರದ ಅಬ್ಬರ ಹೆಚ್ಚಾಗಿರುವ ಕಾರಣ ಉಡುಪಿ ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣ ಮಲ್ಪೆ ಬೀಚ್ ಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.

ಮಳೆಗಾಲದಲ್ಲಿ ಸಮುದ್ರ ಪ್ರಕ್ಷುಬ್ದವಾಗಿರುವ ಸಾಧ್ಯತೆ ಇದ್ದು ಪ್ರವಾಸಿಗರು ಸಮುದ್ರಕ್ಕೆ ಇಳಿದರೆ ಅನಾಹುತವಾಗುವ ಸಾಧ್ಯತೆ ಇದೆ.ಈ ಹಿನ್ನಲೆ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದ್ದು, ಮಲ್ಪೆ ಬೀಚ್ಗೆ ಬೇಲಿ ಹಾಕಿ, ಬೀಚ್ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಅಲ್ಲದೆ, ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಮತ್ತು ಸುರಕ್ಷತೆಯ ದೃಷ್ಟಿಯಿಂದ ಉಡುಪಿ ಜಿಲ್ಲಾಡಳಿತ ಮತ್ತು ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಅನೇಕ ಕ್ರಮಗಳನ್ನು ಕೈಗೊಂಡಿದೆ.

ಸುಮಾರು ಒಂದು ಕಿಲೋಮೀಟರ್ ಉದ್ದಕ್ಕೆ ಏಳು ಅಡಿ ಎತ್ತರದ ಬಲೆ ಅಳವಡಿಸಿ ತಡೆ ಬೇಲಿಯನ್ನು ಸದ್ಯಕ್ಕೆ ನಿರ್ಮಿಸಲಾಗಿದೆ. ಜೊತೆಗೆ ಎಚ್ಚರಿಕೆಯ ಕೆಂಪು ಬಾವುಟ ಹಾಕಲಾಗಿದೆ. ಇದರ ಜೊತೆಗೆ ಆಯಕಟ್ಟಿನ ಜಾಗದಲ್ಲಿ ಬೀಚ್ ಪ್ರವೇಶ ನಿಷೇಧದ ಎಚ್ಚರಿಕೆ ಫಲಕಗಳನ್ನು ಕೂಡ ಅಳವಡಿಸಲಾಗಿದೆ. ಮಲ್ಪೆ ಬೀಚಿನಲ್ಲಿ ತರಬೇತಿ ಪಡೆದ ಜೀವ ರಕ್ಷಕರನ್ನ ನಿಯೋಜನೆ ಮಾಡಲಾಗಿದೆ. ನಿರಂತರವಾಗಿ ಎಟಿಬಿ ಸ್ಯಾಂಡ್ ಬೈಕ್ ಮೂಲಕ ಬೀಚ್ನ್ನು ಗಸ್ತು ತಿರುಗುವ ಜೀವ ರಕ್ಷಕ ಪಡೆಯ ಸದಸ್ಯರು ಬೀಚ್ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಮುನ್ನೆಚ್ಚರಿಕೆಗಳನ್ನ ನೀಡುತ್ತಾ, ಅವರನ್ನು ರಕ್ಷಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಮುದ್ರ ಪ್ರಸಿದ್ಧಿ ಆಗಿರುವ ಹಿನ್ನೆಲೆಯಲ್ಲಿ ಪ್ರವಾಸಿಗರು ಈ ಬಲೆಯನ್ನು ದಾಟಿ ಹೋಗದಂತೆ ಕಟ್ಟುನಿಟ್ಟಿನ ಕ್ರಮವನ್ನು ತೆಗೆದುಕೊಳ್ಳಲಾಗಿದೆ

Leave a Reply

Your email address will not be published. Required fields are marked *

error: Content is protected !!