ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ವಿಷ ಸೇವಿಸಿ ಆತ್ಮಹತ್ಯೆ
ದಾವಣಗೆರೆ: ತಾಲೂಕಿನ ಮಾಯಕೊಂಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ| ಜಿ.ಆರ್. ಗೋವಿಂದರಾಜ್ (53) ಬುಧವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದಾವಣಗೆರೆಯ ಎಸ್.ಎಸ್. ಆಸ್ಪತ್ರೆಯ ರಸ್ತೆ ಬದಿಯಲ್ಲಿ ಅವರ ಶವ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಡಾ.ಗೋವಿಂದರಾಜ್ ಕಳೆದ ಏಳು ವರ್ಷದಿಂದ ಮಾಯಕೊಂಡ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮೃತರು ಪತ್ನಿ, ಇಬ್ಬರು ಗಂಡು ಮಕ್ಕಳು, ಅಪಾರ ಬಂಧು-ಬಳಗ ಅಗಲಿದ್ದಾರೆ.
ಡಾ. ಗೋವಿಂದರಾಜ್ ಮೂಲತಃ ಮಾಯಕೊಂಡ ಗ್ರಾಮದದವರು. ದಾವಣಗೆರೆಯಲ್ಲಿ ವಾಸವಾಗಿದ್ದರು. ಮಂಗಳವಾರ ದಾವಣಗೆರೆಯಲ್ಲಿ ಸಭೆಯಲ್ಲಿ ಭಾಗವಹಿಸುವುದಾಗಿ ಕಡತಗಳೊಂದಿಗೆ ಬಂದಿದ್ದರು. ಬುಧವಾರ ಕರ್ತವ್ಯಕ್ಕೆ ಹಾಜರಾಗಿರಲಿಲ್ಲ ಎಂದು ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ದಾವಣಗೆರೆಯ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





