ಮುಡಿಪು: ಬೋಳಿಯಾರ್‌ನಲ್ಲಿ ಚೂರಿ ಇರಿದ ಪ್ರಕರಣ: 7 ಮಂದಿ ಆರೋಪಿಗಳ ಬಂಧನ

ಮುಡಿಪು: ಬಿಜೆಪಿಯ ಇಬ್ಬರು ಕಾರ್ಯಕರ್ತರಿಗೆ ಉಳ್ಳಾಲ ತಾಲ್ಲೂಕಿನ ಬೋಳಿಯಾರ್‌ನಲ್ಲಿ ಚೂರಿ ಇರಿದ ಪ್ರಕರಣ ಸಂಬಂಧ ಏಳು ಮಂದಿ ಆರೋಪಿಗಳನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.
‘ಬೋಳಿಯಾರ್ ನಿವಾಸಿಗಳಾದ ತಾಜುದ್ದೀನ್ ಅಲಿಯಾಸ್ ಸಿದ್ದಿಕ್, ಸರ್ವಾನ್, ಮುಬಾರಕ್, ಅಶ್ರಫ್, ತಲ್ಲತ್, ಕೋಳಿ ಇರ್ಷಾದ್, ಮತ್ತು ಇಮ್ರಾನ್ ಸೇರಿದಂತೆ ಒಟ್ಟು ಏಳು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 13ಕ್ಕೆ ಏರಿದೆ.
ಇನ್ನಷ್ಟು ಆರೋಪಿಗಳ ಬಂಧನಕ್ಕೆ ಕ್ರಮವಹಿಸಲಾಗಿದೆ’ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ..