March 14, 2026

ಅತ್ತೆಯ ಕಿರುಕುಳಕ್ಕೆ ಬೇಸತ್ತು ಗೃಹಣಿ ಆತ್ಮಹತ್ಯೆ

0
image_editor_output_image-2034821693-1718341648923.jpg

ಚಿಕ್ಕೋಡಿ: ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಯೋಧರೊಬ್ಬರ ಪತ್ನಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೋಳೆ ಗ್ರಾಮದಲ್ಲಿ ನಡೆದಿದೆ.

ರೂಪಾಬಾಯಿ ಬಾಳು ರೂಪನವರ (31) ಆತ್ಮಹತ್ಯೆ ಮಾಡಿಕೊಂಡವರು. ಮೃತಳ‌ ಪತಿ ಬಾಳು ರೂಪನವರ ಅರುಣಾಚಲಪ್ರದೇಶ ಗ್ಯಾಂಟುಕನಲ್ಲಿ ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಅತ್ತೆ ಸೇವಂತಾ ಸಿದರಾಯ ರೂಪನವರ ಅವರಿಂದ ರೂಪಾಬಾಯಿ ದಿನಂಪ್ರತಿ ಕಿರಿಕಿರಿ ಅನುಭವಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಇದೇ ಕಾರಣದಿಂದ ಮನನೊಂದು ಅವರು ಆತ್ಮಹತ್ಯೆ ದಾರಿ ಹಿಡಿದಿರುವುದಾಗಿ ಮೃತಳ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!