ಕಾಸರಗೋಡು: ವಿದ್ಯಾರ್ಥಿನಿ ಆತ್ಮಹತ್ಯೆ

ಕಾಸರಗೋಡು: ವಿಷ ಸೇವನೆಯಿಂದ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಉಪ್ಪಳದಲ್ಲಿ ನಡೆದಿದೆ.
ಉಪ್ಪಳ ಐಲ ಕುದುಪುಳು ವಿನ ಸುರೇಶ್ ರವರ ಪುತ್ರಿ ಧನ್ಯಶ್ರೀ (19) ಮೃತಪಟ್ಟವರು.
ಮಂಗಳೂರು ಕಾಲೇಜಿನ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು. ಹನ್ನೆರಡು ದಿನಗಳ ಹಿಂದೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದು ತಪಾಸಣೆ ನಡೆಸಿದಾಗ ವಿಷ ಸೇವನೆ ಮಾಡಿರುವ ಬಗ್ಗೆ ತಿಳಿದುಬಂದಿತ್ತು.
ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ