ಕಾರ್ಕಳ: ವಿದೇಶಕ್ಕೆ ಹೋಗಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಕಾರ್ಕಳ : ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶಕ್ಕೆ ಹೋಗಿ ತಲೆಮರೆಸಿಕೊಂಡಿದ್ದ ದನ ಕಳ್ಳತನ ಪ್ರಕರಣದ ಆರೋಪಿ ಕುಕ್ಕುಂದೂರು ಜಯಂತಿ ನಗರ ನಾಲ್ಕನೇ ಕ್ರಾಸ್‌ನ ನಿವಾಸಿ ಮೊಹಮ್ಮದ್ ರಫೀಕ್ (33) ಎಂಬಾತನನ್ನು ಕಾರ್ಕಳ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
2021ರಲ್ಲಿ ವಿದೇಶಕ್ಕೆ ಪಲಾಯನ ಮಾಡಿದ್ದ ರಫೀಕ್ ವಿರುದ್ಧ ನ್ಯಾಯಾಲಯ ಬಂಧನ ವಾರಂಟ್ ಜಾರಿ ಮಾಡಿತ್ತು. ಇತ್ತೀಚೆಗೆ ಈತ ವಿದೇಶದಿಂದ ಬಂದಿರುವ ಕುರಿತು ಖಚಿತ ಮಾಹಿತಿ ಲಭಿಸಿದನ್ವಯ ಪೊಲೀಸರು ಬಂಧಿಸಿದ್ದಾರೆ.