March 25, 2026

ಲಾರಿ, ಕಾರು ನಡುವೆ ರಸ್ತೆ ಅಪಘಾತ: ಮೂವರು ಸ್ಥಳದಲ್ಲೇ ಮೃತ್ಯು, ಮತ್ತೆ ಮೂವರು ಗಂಭೀರ

0
image_editor_output_image-1708861143-1718432428952.jpg

ಚಿತ್ರದುರ್ಗ: ಲಾರಿ, ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟು, ಮತ್ತೆ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ಶನಿವಾರ ಸಂಭವಿಸಿದೆ.

ಚಿತ್ರದುರ್ಗದಿಂದ ದಾವಣಗೆರೆ ಕಡೆ ಪ್ರಯಾಣ ಮಾಡುತ್ತಿದ್ದ ಕಾರು ಮತ್ತು ಲಾರಿ ಈ ವೇಳೆ ಲಾರಿಯ ಟಯರ್ ಸ್ಫೋಟಗೊಂಡಿದೆ.

ಪರಿಣಾಮ ಹಿಂದಿನಿಂದ ಬರುತ್ತಿದ್ದ ಕಾರು ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಕಾರಿನಲ್ಲಿದ್ದ ಆರು ಮಂದಿಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೆ ಮೂವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!