July 3, 2026

ಮನೆಯಲ್ಲೇ ನೇಣು ಹಾಕಿಕೊಂಡು ಯುವಕ ಆತ್ಮಹತ್ಯೆ

0
image_editor_output_image-1316375738-1718434923001.jpg

ಸಿದ್ದಾಪುರ: ನೆಲ್ಯಹುದಿಕೇರಿ ಗ್ರಾಮದಲ್ಲಿ ಗುರುವಾರ ಯುವಕ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗ್ರಾಮದ ಶಾಲೆ ರಸ್ತೆ ನಿವಾಸಿ ಜೇಮ್ಸ್ ಎಂಬುವರ ಪುತ್ರ ಜಾನ್ಸನ್ ಎ.ಜೆ (23) ಆತ್ಮಹತ್ಯೆ ಮಾಡಿಕೊಂಡ ಯುವಕ.

ಜಾನ್ಸನ್ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದು,‌ ಕೆಲವು ದಿನಗಳಿಂದ ಆಕೆ ಮಾತನಾಡುತ್ತಿರಲಿಲ್ಲ ಎಂದು ಕೆಲವರಲ್ಲಿ ಜಾನ್ಸನ್‌ ಹೇಳಿಕೊಂಡಿದ್ದರು ಎನ್ನಲಾಗಿದೆ. ಗುರುವಾರ ರಾತ್ರಿ ಊಟ ಮುಗಿಸಿ ಮಲಗಲು ಕೋಣೆಗೆ ಹೋದವರು ಬೆಳಿಗ್ಗೆ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಮನೆಯವರು ಬಾಗಿಲು ತೆಗೆದು ನೋಡಿದಾಗ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ

Leave a Reply

Your email address will not be published. Required fields are marked *

You may have missed

error: Content is protected !!