ಕಾಂಗ್ರೆಸ್‌ನ 40 ಮಂದಿ ಶಾಸಕರು ಶೀಘ್ರ ರಾಜೀನಾಮೆ ನೀಡಲಿದ್ದಾರೆ: ಸಂಸದ ಗೋವಿಂದ ಕಾರಜೋಳ
ಚಿತ್ರದುರ್ಗ: ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಸಿಗದ ಹಿನ್ನೆಲೆಯಲ್ಲಿ ಬೇಸತ್ತಿರುವ ಕಾಂಗ್ರೆಸ್‌ನ 40 ಮಂದಿ ಶಾಸಕರು ರಾಜೀನಾಮೆ ನೀಡಲು ಚಿಂತನೆ ನಡೆಸಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ವಿವೇಚನೆ, ಲೆಕ್ಕಾಚಾರ ಇಲ್ಲದೇ ಗ್ಯಾರಂಟಿ ಯೋಜನೆ ಜಾರಿಗೊಳಿಸಿದ ನಂತರ ಅಭಿವೃದ್ಧಿ ಕೆಲಸಗಳಿಗೆ ಅನುದಾನದ ಕೊರತೆಯಾಗಿದೆ. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಸಿಗದೇ ಇರುವುದರಿಂದ ಕಾಂಗ್ರೆಸ್‌ನ 40 ಮಂದಿ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಚಿಂತನೆ ನಡೆದಿದ್ದಾರೆ ಎಂದರು.




