May 6, 2026

ನಟ ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ಶವವಾಗಿ ಪತ್ತೆ!

0
IMG-20240618-WA0001.jpg

ಬೆಂಗಳೂರು: ಕಾಣೆಯಾಗಿದ್ದ ನಟ ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ಶ್ರೀಧರ್‌ ಎಂಬಾತನ ಶವ ಪತ್ತೆಯಾಗಿದ್ದು,‌ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.

ನಟ ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ಶ್ರೀಧರ್‌ (35) ವಿಷ ಸೇವಿಸಿ ಜೂನ್ 17 ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಯುವ ಮುನ್ನ ಬರೆದಿಟ್ಟಿರುವ ಡೆತ್‌ ನೋಟ್‌ ಕೂಡ ಪತ್ತೆಯಾಗಿದೆ.

ಕೀಟನಾಶಕ ಸೇವನೆ ಮಾಡಿ ಶ್ರೀಧರ್‌ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಆತ ಸಾಯುವ ಮುನ್ನ ಬರೆದಿಟ್ಟಿದ್ದು, ಇದೀಗ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!