March 17, 2026

ವಯನಾಡ್ ನಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ

0
pru-1718637914762_19026cd6aa3_medium.jpg

ಕೇರಳ: 2024ರ ಸಾರ್ವತ್ರಿಕ ಚುನಾವಣೆಯಲ್ಲಿ ರಾಯ್‌ಬರೇಲಿಯನ್ನು ಅಣ್ಣ ರಾಹುಲ್ ಗಾಂಧಿಗೆ ಬಿಟ್ಟುಕೊಟ್ಟ ಪ್ರಿಯಾಂಕಾ ಗಾಂಧಿ ವಾದ್ರಾ, ಈಗ ವಯನಾಡ್ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಗೆ ಅಣಿಯಾಗುವ ಮೂಲಕ ತಮ್ಮ ಚೊಚ್ಚಲ ಚುನಾವಣೆಗೆ ಸಿದ್ಧತೆ ಆರಂಭಿಸಿದ್ದಾರೆ.

ಅಮೇಠಿಯಲ್ಲಿ ಸೋಲಿನ ಭೀತಿಯಲ್ಲಿದ್ದಾಗ ರಾಹುಲ್ ಗಾಂಧಿ ಕೈಹಿಡಿದ ಕ್ಷೇತ್ರ ವಯನಾಡ್. ಇದೇ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿ ಅವರು ಆಯ್ಕೆಯಾಗಿದ್ದಾರೆ. ಈ ಚುನಾವಣೆಯಲ್ಲಂತೂ ಭಾರೀ ಅಂತರದ ಗೆಲುವನ್ನು ಅಲ್ಲಿನ ಮತದಾರರು ರಾಹುಲ್‌ಗೆ ನೀಡಿದ್ದರು. ಎರಡು ಕ್ಷೇತ್ರಗಳಲ್ಲಿ ಒಂದನ್ನು ಉಳಿಸಿಕೊಳ್ಳುವ ಜರೂರು ಎದುರಾದಾಗ, ಪಕ್ಷದ ವರಿಷ್ಠರ ಸಭೆ ನಡೆಸಿ ರಾಯ್‌ಬರೇಲಿ ಉಳಿಸಿಕೊಳ್ಳಲು ನಿರ್ಧರಿಸಿದ್ದರು. ಇದರಿಂದಾಗಿ 52 ವರ್ಷದ ಪ್ರಿಯಾಂಕಾ ಅವರು ವಯನಾಡ್ ಮೂಲಕ ಚುನಾವಣಾ ರಾಜಕೀಯಕ್ಕೆ ಧುಮುಕುತ್ತಿದ್ದಾರೆ.

ರಾಹುಲ್ ಗಾಂಧಿ ಅವರ ರಾಯ್‌ಬರೇಲಿ ಕ್ಷೇತ್ರವನ್ನು ಇಟ್ಟುಕೊಳ್ಳಲು ನಿರ್ಧರಿಸಿದ್ದರಿಂದ, ತೆರವಾಗುವ ವಯನಾಡ್ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸ್ಪರ್ಧಿಸುತ್ತಿರುವುದನ್ನು ಕೇರಳದ ಕಾಂಗ್ರೆಸ್ ಘಟಕದ ಅಧ್ಯಕ್ಷ ವಿ.ಡಿ.ಸತೀಶನ್ ಸ್ವಾಗತಿಸಿದ್ದಾರೆ.

‘ರಾಹುಲ್ ಮತ್ತು ಪಕ್ಷವು ಪ್ರಿಯಾಂಕಾ ಅವರ ಹೆಸರನ್ನು ಅಂತಿಮಗೊಳಿಸಿದೆ. ಅವರು ವಯನಾಡ್‌ಗೆ ಇನ್ನಷ್ಟು ಹತ್ತಿರದವರಾಗಿದ್ದಾರೆ. ಹೀಗಾಗಿ ಉಪಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಅವರು ದಾಖಲೆಯ ಮತಗಳ ಅಂತರದಿಂದ ಗೆಲ್ಲುವುದು ನಿಶ್ಚಿತ’ ಎಂದಿದ್ದಾರೆ.

ಕಳೆದ ಚುನಾವಣೆಯಲ್ಲಿ ವಯನಾಡ್ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಅವರು ಶೇ 64.7ರಷ್ಟು ಮತ ಪಡೆದಿದ್ದರು. ಸಮೀಪದ ಪ್ರತಿಸ್ಪರ್ಧಿ ಸಿಪಿಐನ ಅನ್ನಿ ರಾಜಾ ಅವರ ವಿರುದ್ಧ 3.64 ಲಕ್ಷಗಳ ಮತಗಳ ಅಂತರದಿಂದ ಗೆದ್ದಿದ್ದರು. ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್ ಅವರು 1.3ಲಕ್ಷ ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು.

Leave a Reply

Your email address will not be published. Required fields are marked *

You may have missed

error: Content is protected !!