May 6, 2026

ಬಿಹಾರ್: ಉದ್ಘಾಟನೆಗೂ ಮುನ್ನ ಕುಸಿದು ಬಿದ್ದ ಸೇತುವೆ: ವಿಡಿಯೋ ವೈರಲ್

0
07a8689148259788a5b4c1e1a0a1b325171871072379125_original.jpg

ಬಿಹಾರ್: ಉದ್ಘಾಟನೆಗೂ ಮುನ್ನ ಸೇತುವೆಯೊಂದು ಕುಸಿದು ಬಿದ್ದಿರುವ ಘಟನೆ ಬಿಹಾರದ ಅರಾರಿಯಾದಲ್ಲಿ ಮಂಗಳವಾರ ವರದಿಯಾಗಿದೆ. 12 ಕೋಟಿ ರೂ. ವೆಚ್ಚದಲ್ಲಿ ಈ ಸೇತುವೆಯ ನಿರ್ಮಾಣ ಮಾಡಲಾಗಿತ್ತು ಎಂದು ತಿಳಿದು ಬಂದಿದೆ.

ಬಾಕ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗಿದ್ದ ಸೇತುವೆಯ ಕುಸಿದ ಭಾಗವು ಕೆಲವೇ ಸೆಕೆಂಡುಗಳಲ್ಲಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಘಟನೆಯಲ್ಲಿ ಯಾವುದೇ ಗಾಯಗಳು ವರದಿಯಾಗಿಲ್ಲ. ಬಿಹಾರದ ಅರಾರಿಯಾ ಜಿಲ್ಲೆಯ ಕುರ್ಸಕಾಂತ ಮತ್ತು ಸಿಕ್ತಿ ನಡುವೆ ಪ್ರಯಾಣಕ್ಕೆ ಅನುಕೂಲವಾಗುವಂತೆ ಈ ಸೇತುವೆಯನ್ನು ನಿರ್ಮಿಸಲಾಗುತ್ತಿತ್ತು.

ಸೇತುವೆ ಉದ್ಘಾಟನೆಗೂ ಮುನ್ನವೇ ಕುಸಿದು ಬಿದ್ದಿದೆ. ಸೇತುವೆ ನಿರ್ಮಾಣ ಕಂಪನಿಯ ಮಾಲೀಕರ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸೇತುವೆ ನೀರುಪಾಲಾಗಿರುವ ವಿಡಿಯೋ ವೈರಲಾಗಿದೆ.

Leave a Reply

Your email address will not be published. Required fields are marked *

error: Content is protected !!