March 17, 2026

ಹಾಸನ: ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ನೀಡಿದ್ದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು

0
image_editor_output_image114735673-1718988109532

ಹಾಸನ: ಸೂರಜ್ ರೇವಣ್ಣ ನನ್ನ ಮೇಲೆ ಸಲಿಂಗ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಜೆಡಿಎಸ್ ಕಾರ್ಯಕರ್ತ ಪೊಲೀಸ್ ದೂರು ನಿಡಿದ್ದು, ಆರೋಪಿಸಿದ ವ್ಯಕ್ತಿಯ ವಿರುದ್ಧವೇ ಕೇಸ್ ದಾಖಲಾಗಿದೆ.

ಡಾ. ಸೂರಜ್ ರೇವಣ್ಣ ವಿರುದ್ಧ ಬೆಂಗಳೂರಿನಲ್ಲಿ ದೂರು ನೀಡಿದ ವ್ಯಕ್ತಿಯ ವಿರುದ್ಧ ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿದ ಆರೋಪದಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ.

ಸೂರಜ್ ಆಪ್ತ ಶಿವಕುಮಾರ್ ಹೊಳೆನರಸೀಪುರ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರು ಆಧರಿಸಿ ಹೊಳೆನರಸೀಪುರ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಐದು ಕೋಟಿ ರೂಪಾಯಿ ಹಣ ನೀಡದಿದ್ದರೆ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸುತ್ತೇನೆ ಎಂದು ಬೆದರಿಕೆ ಹಾಕಿದ ಆರೋಪ ಮಾಡಿ ದೂರು ಕೊಡಲಾಗಿದೆ. ಸುಳ್ಳು ದೂರು ನೀಡಿ ಬೆದರಿಕೆ ಹಾಕಿರುವ ಬಗ್ಗೆ ಉಲ್ಲೇಖಿಸಿ ದೂರು ಕೊಡಲಾಗಿದ್ದು, ಐಪಿಸಿ ಸೆಕ್ಸೆನ್ 384, 506 ರ ಅಡಿಯಲ್ಲಿ 168/2024 ರಡಿ ಕೇಸ್ ದಾಖಲಿಸಲಾಗಿದೆ.

ನಿಮ್ಮ ಬಾಸ್ ಬಳಿ ಕೆಲಸ ಕೊಡಿಸು ಎಂದು ಅರಕಲಗೂಡು ಮೂಲದ ಯುವಕ ಕೇಳಿಕೊಂಡಿದ್ದ, ನೀನೇ ಹೋಗಿ ಬಾಸ್ ಭೇಟಿ ಮಾಡು ಎಂದು ಫೊನ್ ನಂಬರ್ ಕೊಟ್ಟಿದ್ದೆ ಎಂದು ದೂರಿನಲ್ಲಿ ಶಿವಕುಮಾರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!