ಕಾಂಗ್ರೆಸ್ ಶಾಸಕನ ಪತ್ನಿ ಆತ್ಮಹತ್ಯೆ
ಕರೀಂನಗರ: ಕರೀಂನಗರ ಜಿಲ್ಲೆಯ ಚೊಪ್ಪದಂಡಿ ಕಾಂಗ್ರೆಸ್ ಶಾಸಕ ಮೇಡಿಪಲ್ಲಿ ಸತ್ಯಂ ಅವರ ಪತ್ನಿ ರೂಪಾದೇವಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅಲ್ವಾಲ್ ಪಂಚಶೀಲಾ ಕಾಲೋನಿಯ ಮನೆಯೊಂದರಲ್ಲಿ ಗುರುವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
12 ವರ್ಷಗಳ ಹಿಂದೆ ಮೇಡಿಪಲ್ಲಿ ಸತ್ಯಂ ರೂಪಾದೇವಿಯನ್ನು ಪ್ರೀತಿಸಿ ಮದುವೆಯಾಗಿದ್ದರು. ಪತ್ನಿ ರೂಪಾದೇವಿ ಜೊತೆ ವೈಮನಸ್ಯ ಇರುವ ಶಂಕೆ ವ್ಯಕ್ತವಾಗಿದೆ. ರೂಪಾದೇವಿ ಮೇಡ್ಚಲ್ ಮುನಿರಾಬಾದ್‌ನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.




