December 19, 2025

ಮಂಗಳೂರು: ಬಿಪಿನ್ ರಾವತ್ ಸಾವಿನ ಬಗ್ಗೆ ಅವಹೇಳನಕಾರಿ ಕಮೆಂಟ್ ಹಾಕಿದ್ದ ವಿಚಾರ:
ಪ್ರಕರಣ ದಾಖಲು: ಕಮಿಷನರ್ ಎನ್ ಶಶಿಕುಮಾರ್

0
IMG-20211211-WA0021.jpg

ಮಂಗಳೂರು: ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನ್ನೂರು ಬಳಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟಿರುವ ಸಿಡಿಎಸ್ ಬಿಪಿನ್ ರಾವತ್ ಅವರ ಸಾವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಕಾಮೆಂಟ್ ಹಾಕುವ ಮೂಲಕ ಸಂಭ್ರಮಿಸಿರುವ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೋವಲ್ ಬಗ್ಗೆ ಪ್ರತಿಕ್ರಿಯಿಸಿದವರ ವಿರುದ್ದ ತನಿಖೆ ನಡೆಸಲಾಗುತ್ತಿದ್ದು, ಅವರ ಬಂಧನವಾಗಿಲ್ಲ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಈ ರೀತಿಯ ಕಾಮೆಂಟ್‌‌ಗಳನ್ನು ಮೂರು ಖಾತೆಗಳಲ್ಲಿ ಹಾಕಿರುವುದು ತಿಳಿದು ಬಂದಿದ್ದು, ಇದು ನಕಲಿ ಖಾತೆಯ ಹಾಗೂ ಯಾಕೆ ಈ ರೀತಿಯ ಕಾಮೆಂಟ್‌‌ಗಳನ್ನು ಹಾಕುತ್ತಿದ್ದಾರೆ ಎಂಬುದನ್ನು ನಾವು ತನಿಖೆ ಮಾಡುತ್ತೇವೆ” ಎಂದರು.

ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 505(1ಎ), 505(2) ಮತ್ತು 505(ಬಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಇದೇ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ, “ಬಿಪಿನ್ ರಾವತ್ ಅವರ ಸಾವಿಗೆ ಇಡೀ ದೇಶವೇ ಕಂಬನಿ‌ ಮಿಡಿಯುತ್ತಿದೆ, ಅದರೆ ಕೆಲವರು ಅವರ ಸಾವನ್ನು ಸಂಭ್ರಮಿಸಿ ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟ್ ಗಳನ್ನ ಹಾಕುತ್ತಿರುವುದು ಖಂಡನೀಯ. ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದಿದ್ದಾರೆ.
ಡಿಸಂಬರ್ 8ರಂದು ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕುನ್ನೂರಿನಲ್ಲಿ ಪತನಗೊಂಡ ಹೆಲಿಕಾಪ್ಟರ್‌ ದುರಂತದಲ್ಲಿ ದೇಶದ ಮೂರು ಸೇನಾಪಡೆಗಳ ಮುಖ್ಯಸ್ಥ ಬಿಪಿನ್‌ ರಾವತ್‌‌, ಅವರ ಪತ್ನಿ ಸೇರಿ 13 ಮಂದಿ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!