February 3, 2026

ಫೈರ್‌ಬಾಲ್ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ: ನಾಲ್ವರು ಸಾವು

0
image_editor_output_image-970188917-1719082258993.jpg

ನವದೆಹಲಿ: ಗುರುಗ್ರಾಮ್‌ನ ದೌಲತಾಬಾದ್ ಇಂಡಸ್ಟ್ರಿಯಲ್ ಏರಿಯಾದಲ್ಲಿ ಫೈರ್‌ಬಾಲ್ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.

ಮೃತರನ್ನು ಕೌಶಿಕ್, ಅರುಣ್, ಪ್ರಶಾಂತ್ ಮತ್ತು ರಾಮ್ ಅವಧ್ ಎಂದು ಗುರುತಿಸಲಾಗಿದೆ. ಈ ಘಟನೆ ಇಂದು (ಶನಿವಾರ) ಮುಂಜಾನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. ಘಟನೆ ನಡೆದ ಕೂಡಲೇ ಸುಮಾರು 24 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾದವು.

Leave a Reply

Your email address will not be published. Required fields are marked *

You may have missed

error: Content is protected !!