September 27, 2026

ಲೈಂಗಿಕ ದೌರ್ಜನ್ಯ ಆರೋಪ: ಸೂರಜ್ ರೇವಣ್ಣ ಬಂಧನ

0
IMG_9911_18_11_2021_20_4_2_1_4D96UQAH.jpg

ಹಾಸನ: ಮಾಜಿ ಸಚಿವ ಹೆಚ್.ಡಿ. ರೇವಣ್ಣ ಪುತ್ರ ಎಂಎಲ್‌ ಸಿ ಸೂರಜ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಸಂಬಂಧ ಹಾಸನ ಸೆನ್‌ ಪೊಲೀಸ್‌ ಠಾಣೆಯ ಪೊಲೀಸರು ಸೂರಜ್‌ ರೇವಣ್ಣರನ್ನು ಬಂಧಿಸಲಾಗಿದೆ.

ನಿನ್ನೆ ಹಾಸನದ ಸೆನ್‌ ಪೊಲೀಸ್‌ ಠಾಣೆಗೆ ಕರೆತಂದಿದ್ದ ಪೊಲೀಸರು ಇಂದು ಮುಂಜಾನೆ ನಾಲ್ಕು ಗಂಟೆಯವರೆಗೂ ಸುಧೀರ್ಘ ವಿಚಾರಣೆ ನಡೆಸಿದ್ದಾರೆ.

 

ಸೂರಜ್‌ ರೇವಣ್ಣ ಆಪ್ತ ಶಿವಕುಮಾರ್‌ ನೀಡಿದ್ದ ದೂರಿನ್ವಯ ತಾಂತ್ರಿಕ ಸಾಕ್ಷ್ಯ ಸಂಗ್ರಹಕ್ಕೆ ಪೊಲೀಸರು ಮುಂದಾಗಿದ್ದಾರೆ. ಹೀಗಾಗಿ ಯಾವುದೇ ಕ್ಷಣದಲ್ಲೂ ಸೂರಜ್‌ ರೇವಣ್ಣ ಬಂಧನವಾಗುವ ಸಾಧ್ಯತೆ ಇದೆ. ಸಂತ್ರಸ್ತ ಯುವಕ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಿದ ಸಂಬಂಧದ ಆಡಿಯೋಗಳನ್ನು ಈಗಾಗಲೇ ವಶಕ್ಕೆ ಪಡೆದಿರುವ ಪೊಲೀಸರು ಇನ್ನಷ್ಟು ಆಡಿಯೋ ಸೇರಿ ಹಲವು ದಾಖಲೆಗಳನ್ನು ಪಡೆಯಲು ತನಿಖೆ ಮುಂದುವರೆಸಿದ್ದಾರೆ.

ಸೂರಜ್‌ ರೇವಣ್ಣ ಅವರು ಚನ್ನರಾಯಪಟ್ಟಣ ತಾಲೂಕು ಗನ್ನಿಕಡ ಬಳಿ ಇರುವ ತೋಟದ ಮನೆಗೆ ಜೂ. 16ರಂದು ನನ್ನನ್ನು ಕರೆಸಿಕೊಂಡು ನನ್ನ ಮೇಲೆ ಅಸಹಜ ಲೈಂಗಿಕ ಕ್ರಿಯೆ ನಡೆಸಿ ದೌರ್ಜನ್ಯ ಎಸಗಿದ್ದಾರೆ ಎಂದು ಅರಕಲಗೂಡು ತಾಲೂಕಿನ ಜೆಡಿಎಸ್‌ ಕಾರ್ಯಕರ್ತನೊಬ್ಬ ಹೊಳೆನರಸೀಪುರ ಪೊಲೀಸರಿಗೆ ದೂರು ನೀಡಿದ್ದಾನೆ.

Leave a Reply

Your email address will not be published. Required fields are marked *

You may have missed

error: Content is protected !!