September 25, 2026

ಕಾರ್ಕಳ: ಬೈಕ್ ಡಿಕ್ಕಿ ಹೊಡೆದು 10ನೇ ತರಗತಿ ವಿದ್ಯಾರ್ಥಿನಿ ಮೃತ್ಯು

0
image_editor_output_image-233772200-1719149453893

ಕಾರ್ಕಳ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸಾವನ್ನಪ್ಪಿದ ಘಟನೆ ಬೆಳ್ಮಣ್ ಸಮೀಪದ ನಂದಳಿಕೆ ಕ್ರಾಸ್ ರಸ್ತೆಯಲ್ಲಿ ನಡೆದಿದೆ.

ನಂದಳಿಕೆ ನಿವಾಸಿ ಪ್ರಣಮ್ಯ ಶೆಟ್ಟಿ 14 (ವ). ಮೃತ ಬಾಲಕಿ.

 

ನಂದಳಿಕೆಯ ಲಕ್ಷ್ಮೀ ಜನಾರ್ದನ ದೇವಾಲಯದ ಪೂಜೆಗೆಂದು ಹೆದ್ದಾರಿ ಬದಿಯಲ್ಲಿ ಸಂಜೆಯ ವೇಳೆಯಲ್ಲಿ ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಅಜಾಗರೂಕತೆ ಹಾಗೂ ವೇಗವಾಗಿ ಬಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದ್ದು ಡಿಕ್ಕಿಯ ರಭಸಕ್ಕೆ ಪಾದಚಾರಿ ಬಾಲಕಿ ಗಂಭೀರ ಗಾಯಗೊಂಡಿದ್ದು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಕೊನೆಯುಸಿರೆಳೆದಿದ್ದಾಳೆ. ಮುಲ್ಲಡ್ಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹತ್ತನೆ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿನಿ. ಘಟನೆಯ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!