May 6, 2026

ಅಬ್ಬಿ ಫಾಲ್ಸ್ ನಲ್ಲಿ ಬಿದ್ದು ಸಾಫ್ಟ್‌ವೇರ್ ಉದ್ಯೋಗಿ ಸಾವು

0
image_editor_output_image1061333550-1719164932439.jpg

ಹೊಸನಗರ: ಫಾಲ್ಸ್ ವೀಕ್ಷಣೆಗೆಂದು ಹೋಗಿದ್ದ ಸಾಫ್ಟ್‌ವೇರ್ ಉದ್ಯೋಗಿ ನಾಪತ್ತೆಯಾಗಿರೋ ಘಟನೆ ಹೊಸನಗರ ತಾಲೂಕಿನ ಅಬ್ಬಿ ಫಾಲ್ಸ್ನಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಬೆಂಗಳೂರಿನ ಖಾಸಗಿ ಸಂಸ್ಥೆಯ ಉದ್ಯೋಗಿ 26 ವರ್ಷದ ವಿನೋದ್ ಎಂದು ಗುರುತಿಸಲಾಗಿದೆ. ಈತ ಬಳ್ಳಾರಿ ಮೂಲದವನಾಗಿದ್ದು, ಪ್ರವಾಸಕ್ಕೆ ತೆರಳಿದ್ದ ವೇಳೆ ಫಾಲ್ಸ್ಗೆ ತೆರಳಿದ್ದಾಗ ಕಾಲು ಜಾರಿ ಬಿದ್ದಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನಾಪತ್ತೆಯಾದ ವಿನೋದ್ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಕೆಲಸ ಮಾಡುತ್ತಿದ್ದನಂತೆ. 12 ಜನರ ತಂಡದೊಂದಿಗೆ ಆಗಮಿಸಿ, ಕೊಡಚಾದ್ರಿಯಿಂದ ಅಬ್ಬೆ ಫಾಲ್ಸ್ಗೆ ತೆರಳಿದ್ದರು. ಇದೇ ವೇಳೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ಫಾಲ್ಸ್‌ ಬಳಿ ತೆರಳಿದ್ದಾಗ ಕಾಲು ಜಾರಿ ಬಿದ್ದಿದ್ದಾನೆ.

Leave a Reply

Your email address will not be published. Required fields are marked *

error: Content is protected !!