ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಜೀಪು ನಡುವೆ ಅಪಘಾತ
ಉಪ್ಪಿನಂಗಡಿ: ಉಪ್ಪಿನಂಗಡಿಯ ಗಾಂಧಿಪಾರ್ಕ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಜೀಪು ನಡುವೆ ಅಪಘಾತ ಸಂಭವಿಸಿದೆ.
ಜೀಪೊಂದು ಕಾರಿಗೆ ಢಿಕ್ಕಿಯಾದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದ್ದು ಕಾರಿನ ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ನೆಲ್ಯಾಡಿ ಕಡೆಯಿಂದ ಬರುತ್ತಿದ್ದ ಮಾರುತಿ ರಿಟ್ಜ್ ಕಾರಿಗೆ ಹಿಂಬದಿಯಲ್ಲಿ ಬರುತ್ತಿದ್ದ ಜೀಪು ಡಿಕ್ಕಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಜೀವಕ್ಕೆ ಹಾನಿಯಾಗಿಲ್ಲ.





