ಉಡುಪಿ: ಜಿಲ್ಲಾ ಕಾರಾಗೃಹದಲ್ಲಿ ಆರೋಪಿಗಳಿಬ್ಬರು ದಾಂಧಲೆ
ಉಡುಪಿ: ಹಿರಿಯಡ್ಕ ಕಾಜರಗುತ್ತು ಜಿಲ್ಲಾ ಕಾರಾಗೃಹದಲ್ಲಿ ಆರೋಪಿಗಳಿಬ್ಬರು ದಾಂಧಲೆ ನಡೆಸಿರುವುದು ವರದಿಯಾಗಿದೆ.
ಜಿಲ್ಲಾ ಅಧೀಕ್ಷಕರು, ಸಿಬ್ಬಂದಿಯ ಮೇಲೆ ಹಲ್ಲೆ ಯತ್ನಿಸಿರುವ ಆರೋಪವು ಆರೋಪಿಗಳ ಮೇಲಿದೆ.
ಉಡುಪಿ ಗ್ಯಾಂಗ್ ವಾರ್ ಆರೋಪಿಗಳಿಬ್ಬರು ಹಿರಿಯಡ್ಕ ಕಾಜರಗುತ್ತು ಎಂಬಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ದಾಂಧಲೆ ನಡೆಸಿ, ಜಿಲ್ಲಾ ಅಧೀಕ್ಷಕರು, ಸಿಬ್ಬಂದಿಯ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ.
ಕಾರಾಗೃಹದಲ್ಲಿರುವ ವಿಚಾರಣಾ ಕೈದಿಗಳಾದ ಮುಹಮ್ಮದ್ ಆಶಿಕ್ ಮತ್ತು ಮಹಮ್ಮದ್ ಸಕ್ಲೇನ್ ಪಿಜನ್ ಕಾಲ್ ಸಿಸ್ಟಮ್ ಕರೆ ಮಾಡಲು ತಡವಾಯಿತೆಂದು ಹೇಳಿ ಕರ್ತವ್ಯದಲ್ಲಿದ್ದ ಜೈಲರ್ ಎಸ್.ಎ.ಶಿರೋಳ ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಹಾಕಿ ಜೋರಾಗಿ ಕೂಗಾಡಿದ್ದಾರೆ.
ಅಲ್ಲದೆ ಅಧೀಕ್ಷಕರ ಕಚೇರಿಯಿಂದ ಕರೆದುಕೊಂಡು ಹೋಗುವಾಗ ಸಿಬ್ಬಂದಿಯೊಂದಿಗೆ ಮತ್ತೆ ಗಲಾಟೆ ಅರಂಭಿಸಿ ಸಿಬ್ಬಂದಿಯನ್ನು ತಳ್ಳಿ ಕೊಠಡಿಯಲ್ಲಿದ್ದ ಬೆಂಕಿ ನಂದಿಸುವ ಯಂತ್ರವನ್ನು ತೆಗೆಯಲು ಪ್ರಯತ್ನಿಸಿದ್ದರು ಎಂದು ಆರೋಪಿಸಲಾಗಿದೆ.




