March 17, 2026

ಗ್ರಾಮ ಪಂಚಾಯಿತಿಯಲ್ಲೇ ಜನನ, ಮರಣ ಪ್ರಮಾಣ ಪತ್ರ ಲಭ್ಯ

0
image_editor_output_image700214281-1719310671230.jpg

ಬೆಂಗಳೂರು: ಜುಲೈ 1 ರಿಂದ ಗ್ರಾಮ ಪಂಚಾಯಿತಿ ಕೇಂದ್ರದಲ್ಲಿಯೇ ಜನನ, ಮರಣ ಪ್ರಮಾಣ ಪತ್ರ ಲಭ್ಯವಿರಲಿದೆ.

ರಾಜ್ಯದಲ್ಲಿ ಜುಲೈ 1ರಿಂದ ಜಾರಿಗೆ ಬರುವಂತೆ ಜನನ ಅಥವಾ ಮರಣ ಸಂಭವಿಸಿದ 30 ದಿನಗಳ ಒಳಗೆ ನೋಂದಣಿ ಮಾಡಿ ಪ್ರಮಾಣ ಪತ್ರ ವಿತರಿಸುವ ಅಧಿಕಾರವನ್ನು ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳಿಗೆ ನೀಡಲಾಗಿದೆ.

ಜನನ, ಮರಣಗಳ ಮುಖ್ಯ ನೋಂದಣಾಧಿಕಾರಿಗಳು ಸುತ್ತೋಲೆ ಹೊರಡಿಸಿದ್ದು, ಜನನ, ಮರಣ ಘಟನೆಗಳು ಸಂಭವಿಸಿದ 30 ದಿನಗಳವರೆಗಿನ ಪ್ರಕರಣಗಳಲ್ಲಿ ನೋಂದಾಯಿಸಲು ಪಂಚಾಯಿತಿ ಕಾರ್ಯದರ್ಶಿ ಹಾಗೂ 30 ದಿನಗಳಿಂದ ಒಂದು ವರ್ಷದ ವರೆಗಿನ ಪ್ರಕರಣಗಳಲ್ಲಿ ಗ್ರಾಪಂ ಆಡಳಿತ ಅಧಿಕಾರಿಗಳನ್ನು ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ಆದೇಶ ಹೊರಡಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!