ವಿರೋಧ ಪಕ್ಷದ ನಾಯಕನಾಗಿ ಸಂಸದ ರಾಹುಲ್ ಗಾಂಧಿ ಆಯ್ಕೆ
ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ಕಾಂಗ್ರೆಸ್ ನಾಯಕ , ರಾಯ್ಬರೇಲಿ ಸಂಸದ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ. ದೆಹಲಿಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಿಂದ ಇಂಡಿಯಾ ಬ್ಲಾಕ್‌ನ ಫ್ಲೋರ್ ಲೀಡರ್‌ಗಳ ಸಭೆಯ ಬಳಿಕ ಈ ನಿರ್ಧಾರ ಮಾಡಲಾಗಿದೆ.
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ಪ್ರತಿ ಪಕ್ಷದ ನಾಯಕರನ್ನಾಗಿ ನೇಮಿಸಲಾಗಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಪ್ರತಿ ಪಕ್ಷಗಳ ನಾಯಕರ ಸಭೆಯ ನಂತರ ಪ್ರಕಟಿಸಿದ್ದಾರೆ.
ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರು ಸ್ಪೀಕರ್ ಭರ್ತೃಹರಿ ಮಹತಾಬ್ ಅವರಿಗೆ ಅವರಿಗೆ ಪತ್ರ ಬರೆದು ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವ ನಿರ್ಧಾರವನ್ನು ತಿಳಿಸಲಾಗಿದೆ. ಇತರ ಪದಾಧಿಕಾರಿಗಳನ್ನು ನಂತರ ನಿರ್ಧರಿಸಲಾಗುವುದು ಎಂದು ವೇಣುಗೋಪಾಲ್ ಹೇಳಿದ್ದಾರೆ.