March 17, 2026

ಉಳ್ಳಾಲ: ಮನೆ ಮೇಲೆ ಕಾಂಪೌಂಡ್ ಬಿದ್ದು ಮಕ್ಕಳು ಸಹಿತ ನಾಲ್ವರು ಮೃತ್ಯು

0
image_editor_output_image556996098-1719373354092

ಉಳ್ಳಾಲ : ತಾಲೂಕಿನ ಮುನ್ನೂರು ಗ್ರಾಮದ ಮದನಿ ನಗರ ಎಂಬಲ್ಲಿ ಬುಧವಾರ ಬೆಳಗ್ಗೆ ಮನೆಯ ಹಿಂಬದಿಯಲ್ಲಿದ್ದ ಕಂಪೌಂಡ್ ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.

ಮನೆಯೊಳಗೆ ವಾಸ್ತವ್ಯವಿದ್ದ ಯಾಸಿರ್(45), ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಮೃತರು.

ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು, ಕಾರ್ಯಾಚರಣೆ ನಡೆಸಲಾಗಿದೆ. ಇಬ್ಬರ ಶವಗಳನ್ನು ಹೊರ ತೆಗೆಯಲಾಗಿದೆ.

ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅವಘಡ ಸಂಭವಿಸಿದೆ. ಅಬೂಬಕ್ಕರ್ ಎಂಬವರಿಗೆ ಸಂಬಂಧಿಸಿದ ಕಂಪೌಂಡ್ ಕುಸಿದು ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಸ್ಥಳೀಯರು ಮೂವರ ಮೃತದೇಹಗಳನ್ನು ಹೊರತೆಗೆದಿದ್ದು, ಬಾಲಕಿಯ ಮೃತದೇಹಕ್ಕಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ.

Leave a Reply

Your email address will not be published. Required fields are marked *

You may have missed

error: Content is protected !!