November 22, 2024

20 ಸಾವಿರ ರೂ.ಲಂಚ ಪಡೆಯುತ್ತಿದ್ದಾಗ ತಾಲೂಕು ಪಂಚಾಯತ್ ಇಒ ಲೋಕಾಯುಕ್ತ ಬಲೆಗೆ

0

ಕಲಬುರಗಿ: ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಕಾಮಗಾರಿಯ ಕ್ರಿಯಾ ಯೋಜನೆ ಮಾಡಿಕೊಡಲು ₹20 ಸಾವಿರ ಲಂಚ ಪಡೆಯುತ್ತಿದ್ದ ಆರೋಪದಡಿ ಯಡ್ರಾಮಿ ತಾಲ್ಲೂಕು ಪಂಚಾಯಿತಿ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಮತ್ತು ಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯನ್ನು ಲೋಕಾಯುಕ್ತ ಪೊಲೀಸರು ಮಂಗಳವಾರ ವಶಕ್ಕೆ ಪಡೆದರು.

ಪ್ರಭಾರ ಇಒ ಮಹಾಂತೇಶ ಪುರಾಣಿಕ ಮತ್ತು ಗ್ರಾ.ಪಂ. ಕಾರ್ಯದರ್ಶಿ ಅರವಿಂದ ಸಾಹು ಕುರಳಗೇರಾ ಲಂಚ ಪಡೆದ ಆರೋಪಿಗಳು. ಮಳ್ಳಿ ಗ್ರಾಮದ ನಬಿಲಾಲ್ ಅವರು ನೀಡಿದ ದೂರಿನ ಅನ್ವಯ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!