ವಿಟ್ಲ: ಲಾರಿ ಚಾಲಕನಿಗೆ ಹೃದಯಾಘಾತ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ವಿಟ್ಲ : ಚಾಲಕನಿಗೆ ಹೃದಯಾಘಾತ ಸಂಭವಿಸಿದ ಹಿನ್ನಲೆ ನಿಯಂತ್ರಣ ತಪ್ಪಿದ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ವಿಟ್ಲ ಸಮೀಪದ ಮೈರ ಎಂಬಲ್ಲಿ ನಡೆದಿದೆ.
ಘಟನೆಯಿಂದಾಗಿ ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
