March 17, 2026

ಮಂಗಳೂರು: ವಿದ್ಯುತ್ ತಂತಿ ತಗುಲಿ ಉಪ್ಪಿನಂಗಡಿ ಆಟೋ ಚಾಲಕ ಸಹಿತ ಇಬ್ಬರು ಮೃತ್ಯು

0
image_editor_output_image1953397807-1719463345149

ಮಂಗಳೂರು: ವಿದ್ಯುತ್ ತಂತಿ ತಗುಲಿ ಇಬ್ಬರು ಆಟೋ ಚಾಲಕರು ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ನಗರದ ರೊಸಾರಿಯೊ ಶಾಲೆಯ ಬಳಿ ನಡೆದಿದೆ.

ಮೃತ ರಿಕ್ಷಾ ಚಾಲಕರನ್ನು ಉಪ್ಪಿನಂಗಡಿಯ ರಾಜು ಮತ್ತು ಸಕಲೇಶಪುರ ದೇವರಾಜು ಎಂದು ಗುರುತಿಸಲಾಗಿದೆ.

ಇಂದು ಬೆಳಗ್ಗೆ ರಿಕ್ಷಾ ತೊಳೆಯುವ ವೇಳೆ ಮಳೆಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ವಿದ್ಯುತ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇಬ್ಬರೂ ಪಾಂಡೇಶ್ವರದ ರೊಸಾರಿಯೋ ಚರ್ಚ್ ಹಿಂಬದಿ ಬಾಡಿಗೆ ರೂಂ ನಲ್ಲಿ ವಾಸವಿದ್ದರು ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!