May 3, 2026

ಬಂಟ್ವಾಳ: ನೇತ್ರಾವತಿ ನೀರಿನ ಮಟ್ಟ ಏರಿಕೆ:

0
image_editor_output_image452991702-1719465066053

ಬಂಟ್ವಾಳ: ಘಟ್ಟ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ‌ಸುರಿಯುತ್ತಿರುವ ಉತ್ತಮ ಮಳೆಗೆ ನೇತ್ರಾವತಿ ನದಿ‌ನೀರಿನ‌ ಮಟ್ಟದಲ್ಲಿ ಏರಿಕೆಯಾಗಿದೆ.

ಇಂದು ಬೆಳಿಗ್ಗೆ 5.9 ಮೀ ನೀರು ಏರಿಕೆಯಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು ರೆಡ್ ಅಲರ್ಟ್ ಘೊಷಣೆ ಮಾಡಲಾಗಿದೆ. ಹಾಗಾಗಿ ನದಿ ತೀರದ ಜನರು ಎಚ್ಚರಿಕೆಯಿಂದ ಇರಬೇಕು ಮತ್ತು ಅನಗತ್ಯವಾಗಿ ನದಿ ಬದಿಗೆ ಯಾರು ಹೋಗದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಸುಬ್ರಹ್ಮಣ್ಯ ಹಾಗೂ ಘಟ್ಟ ಪ್ರದೇಶಗಳಲ್ಲಿ ಕಳೆದ ರಾತ್ರಿಯಿಂದ ಸುರಿದ ನಿರಂತರ ಮಳೆಗೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ಸ್ನಾನ ಘಟ್ಟ ಮುಳುಗಡೆಯಾಗಿದೆ.

ನಿರಂತರ ಮಳೆಗೆ ನದಿಯಲ್ಲಿ ನೀರಿ ಮಟ್ಟ ಏರಿಕೆಯಾಗಿ ಇದೀಗ ಸ್ನಾನ ಘಟ್ಟ ಮುಳುಗಡೆಯಾಗಿದ್ದು, ನದಿಗಿಳಿಯದಂತೆ ಭಕ್ತರಿಗೆ ಸೂಚಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!