ಪಡೀಲ್–ಬಜಾಲ್ ಸಂಪರ್ಕಿಸುವ ರಸ್ತೆಯ ಅಂಡರ್ಪಾಸ್ ಜಲಾವೃತ
ಪಡೀಲ್: ನಗರದ ಹಲವು ಕಡೆಗಳಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೇ ನೀರು ರಸ್ತೆಯಲ್ಲೇ ಹರಿದು ಹೋಗುತ್ತಿದ್ದು, ಜನರು ಪರದಾಡುವಂತಾಗಿದೆ.
ನಗರದ ಪಡೀಲ್ – ಬಜಾಲ್ ಸಂಪರ್ಕಿಸುವ ರಸ್ತೆಯ ಅಂಡರ್ಪಾಸ್ ನೀರಿನಿಂದ ತುಂಬಿ ಮುಳುಗಿ ಹೋಗಿದೆ. ಇಂದು ಬೆಳಿಗ್ಗೆ ಅಂಡರ್‌ಪಾಸ್ ಕೆಳಭಾಗದಲ್ಲಿ ನೀರು ತುಂಬಿಕೊಂಡಿದ್ದು ಜನ ಸಂಚರಿಸಲಾಗದೇ ತೊಂದರೆ ಅನುಭವಿಸಿದರು.
ಕಾರೊಂದು ನೀರಿನಲ್ಲಿ ಬರಲಾಗದ ಸ್ಥಿತಿಯಲ್ಲಿದ್ದು ಬಳಿಕ ಸ್ಥಳೀಯರು ವಾಹನವನ್ನು ದೂಡಿಕೊಂಡು ಬಂದು ಮೇಲೆ ತಂದಿದ್ದಾರೆ. ಪಡೀಲ್ – ಬಜಾಲ್ ಸಂಪರ್ಕಿಸುವ ಈ ಅಂಡರ್ಪಾಸ್ ಪ್ರತೀ ಮಳೆಗಾಲದ ಸಂದರ್ಭದಲ್ಲೂ ಜನ ಕಂಗೆಡುತ್ತಿದ್ದಾರೆ.