March 17, 2026

ಕರಾವಳಿಯಲ್ಲಿ ಮುಂದುವರಿದ ಮಳೆ: ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಸಂಪೂರ್ಣ ಮುಳುಗಡೆ

0
image_editor_output_image561190542-1719477842396.jpg

ಸುಬ್ರಹ್ಮಣ್ಯ: ಕರಾವಳಿಯಲ್ಲಿ ಮಳೆ ಅಬ್ಬರ ಜೋರಾಗಿದ್ದು, ಪಶ್ಚಿಮಘಟ್ಟಪ್ರದೇಶಗಳಲ್ಲಿ ಎಡೆಬಿಡದೆ ಮಳೆಯಾಗುತ್ತಿದ್ದು, ಇದರಿಂದಾಗಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ.

ಈ ಹಿನ್ನಲೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸ್ನಾನಘಟ್ಟ ಸಂಪೂರ್ಣ ಮುಳುಗಡೆ, ಮಳೆ ಅಬ್ಬರಕ್ಕೆ ಕುಮಾರಧಾರಾ ಕಿಂಡಿ ಅಣೆಕಟ್ಟು ಸಂಪೂರ್ಣ ಜಲಾವೃತವಾಗಿದೆ. ನದಿಗಿಳಿಯದಂತೆ ಭಕ್ತಾದಿಗಳಿಗೆ ಸೂಚನೆ ನೀಡಲಾಗಿದ್ದು, ಅವರು ನದಿ ದಡದಲ್ಲೇ ತೀರ್ಥಸ್ನಾನ ಮಾಡುತ್ತಿದ್ದಾರೆ.

ನದಿ ತೀರದಲ್ಲಿ ಕುಕ್ಕೆ‌ ಸುಬ್ರಹ್ಮಣ್ಯ ದೇವಸ್ಥಾನದ ಭದ್ರತಾ ಸಿಬ್ಬಂದಿ ಹಾಗೂ ಗೃಹರಕ್ಷಕ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಕುಮಾರಧಾರಾ ನದಿಯ ಉಪನದಿ ದರ್ಪಣತೀರ್ಥ ಕೂಡ ಮೈತುಂಬಿ ಹರಿಯುತಿದೆ

Leave a Reply

Your email address will not be published. Required fields are marked *

You may have missed

error: Content is protected !!