ಮಡಿಕೇರಿ: ಹೃದಯಾಘಾತದಿಂದ ಯುವತಿ ಮೃತ್ಯು
ಮಡಿಕೇರಿ: ಹೃದಯಾಘಾತದಿಂದ ಯುವತಿಯೋರ್ವಳು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ ನೆಲಜಿ ಗ್ರಾಮದಲ್ಲಿ ನಡೆದಿದೆ.
ನೆಲಜಿ ಗ್ರಾಮದ ಕಾಫಿ ಬೆಳೆಗಾರರಾದ ಪೊನ್ನಪ್ಪ ಅವರ ಮಗಳು ನಿಲಿಕಾ ಪೊನ್ನಪ್ಪ (24) ಮೃತ ಯುವತಿ.
ಆಕೆ ಮಡಿಕೇರಿಯಲ್ಲಿರುವ ಕೊಡಗು ವೈದ್ಯಕೀಯ ಕಾಲೇಜು ಮತ್ತು ಬೋಧಕ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.