ಐಸಿಸಿ ಟ್ವೆಂಟಿ-20 ವಿಶ್ವಕಪ್: ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಬಗ್ಗುಬಡಿದ ಭಾರತ ಫೈನಲ್ಗೆ ಲಗ್ಗೆ
ಗಯಾನ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂದವನ್ನು ಬಗ್ಗುಬಡಿದ ಭಾರತ ಫೈನಲ್ಗೆ ಲಗ್ಗೆ ಇಟ್ಟಿದೆ. ಟಿ20 ವಿಶ್ವಕಪ್ನಲ್ಲಿ ಭಾರತ ಎರಡನೇ ಭಾರಿಗೆ ಫೈನಲ್ ಪ್ರವೇಶ ಮಾಡಿತು.
ಭಾರತದ ನೀಡಿದ್ದ 172 ರನ್ಗಳ ಕಠಿಣ ಗುರಿ ಬೆನ್ನತ್ತಿದ್ದ ಇಂಗ್ಲೆಂಡ್ 16.4 ಓವರ್ಗಳಲ್ಲಿ ತನ್ನೆಲ್ಲ ವಿಕೆಟ್ಗಳನ್ನು ಕಳೆದುಕೊಂಡು ಕೇವಲ 103 ರನ್ ಗಳಿಸಿ ಸೋಲೊಪ್ಪಿಕೊಂಡಿತು. ಆರಂಭದ ನಾಲ್ಕು ಓವರ್ಗಳಲ್ಲಿ ಉತ್ತಮ ಪ್ರತಿರೋಧ ತೋರಿದರೂ ಇಂಗ್ಲೆಂಡ್ ಕಡೆಗಿನ ಪಂದ್ಯ ನಾಟಕೀಯ ಕುಸಿತ ಕಂಡಿತು.
ಮೊದಲು ಬ್ಯಾಟ್ ಮಾಡಿದ ಭಾರತ, ಇಂಗ್ಲೆಂಡ್ ತಂಡಕ್ಕೆ 172 ರನ್ಗಳ ಗೆಲುವಿನ ಗುರಿ ನೀಡಿದೆ.
ಟಾಸ್ ಗೆದ್ದ ಇಂಗ್ಲೆಂಡ್ ಭಾರತವನ್ನು ಬ್ಯಾಟಿಂಗ್ಗೆ ಆಹ್ವಾನಿಸಿತು. 8 ಓವರ್ಗಳ ನಂತರ ಪಂದ್ಯಕ್ಕೆ ಮಳೆ ಅಡ್ಡಿಯಾಯಿತು. ಬಳಿಕ ಕೆಲ ಹೊತ್ತಿನ ನಂತರ ಮಳೆರಾಯ ಬಿಡುವು ಕೊಟ್ಟ. ನಂತರ ಸ್ಪೋಟಕ ಆಟವಾಡಿದ ಭಾರತ ತಂಡದ ಆಟಗಾರರು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 171 ರನ್ ಗಳಿಸಿದರು.