ಭೀಕರ ರಸ್ತೆ ಅಪಘಾತ: 13 ಮಂದಿ ಮೃತ್ಯು
ಹಾವೇರಿ: ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ಮೃತಪಟ್ಟ ಘಟನೆ ಹಾವೇರಿ ಬಳಿ ನಡೆದಿದೆ.
ಹಾವೇರಿಯ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.
ಮೃತರನ್ನು ನಿದ್ದಪ್ಪ(45), ಶರಣು (40), ಯಲ್ಲಪ್ಪ (50), ನಾಗೇಶ್ (40), ನಾಗೇಶ್ (18) ಯಲ್ಲಪ್ಪ (65), ಗಣೇಶಪ್ಪ (65), ರಂಗನಾಥ ಸ್ವಾಮಿ (62) ಮತ್ತು ಇವರ 6 ಮತ್ತು 4 ವರ್ಷದ ಇಬ್ಬರು ಮಕ್ಕಳು, ಚಾಲಕ ನಾಗೇಶ್ (23), ಶರಣಪ್ಪ (24), ಪರಶುರಾ (40), ಮಂಜುಳಾ ರಾಮಕೃಷ್ಣ (50) ಎಂದು ಗುರುತಿಸಲಾಗಿದೆ.




