ಭಾರೀ ಮಳೆಗೆ ವಿಮಾನ ನಿಲ್ದಾಣದ ಟರ್ಮಿನಲ್ ಮೇಲ್ಛಾವಣಿ ಕುಸಿದು 6 ಮಂದಿಗೆ ಗಾಯ
ನವದೆಹಲಿ: ದೆಹಲಿ ಸುತ್ತಮುತ್ತ ಭಾರಿ ಮಳೆಯಾಗುತಿತ್ತು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.
ರಾತ್ರಿಯಿಡಿ ಸುರಿದ ಭಾರೀ ಮಳೆಯಿಂದಾಗಿ ದೆಹಲಿ-ಎನ್‌ಸಿಆರ್‌ನ ಸುತ್ತಮುತ್ತಲ ಭಾಗಗಳು ಜಲಾವೃತಗೊಂಡಿವೆ. ಭಾರಿ ಮಳೆಗೆ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್-1ರಲ್ಲಿನ ಮೇಲ್ಛಾವಣಿಯ ಭಾಗ ಕುಸಿದು ಆರು ಮಂದಿ ಗಾಯಗೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ನಡೆದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ತಂಡ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಿದೆ, ಘಟನೆಯಲ್ಲಿ ಓರ್ವ ವ್ಯಕ್ತಿ ಕುಸಿದು ಬಿದ್ದ ಕಟ್ಟಡದ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದ್ದು ರಕ್ಷಣಾ ತಂಡದಿಂದ ಕಾರ್ಯಾಚರಣೆ ಮುಂದುವರೆದಿದೆ.