ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಯೂಸುಫ್ ಪಠಾಣ್
ನವದೆಹಲಿ: ಪಶ್ಚಿಮ ಬಂಗಾಳದ ಬರ್ಹಾಂಪೋರ್ ಲೋಕಸಭಾ ಕ್ಷೇತ್ರದ ಟಿಎಂಸಿ ಸಂಸದ, ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ಬುಧವಾರ 18ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ “ಜೈ ಹಿಂದ್, ಜೈ ಗುಜರಾತ್, ಜೈ ಬಂಗಾಳ ಎಂದು ಘೋಷಣೆ ಕೂಗಿದರು.
ಯೂಸುಫ್ ಪಠಾಣ್ ಮುಸ್ಲಿಂ ಸಮುದಾಯದವರಾಗಿದ್ದರೂ ಕೂಡ ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು ಅಚ್ಚರಿಗೆ ಕಾರಣವಾಗಿದ್ದು, ಕೆಲ ಮುಸ್ಲಿಂ ಮೂಲಭೂತವಾದಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಟಿಎಂಸಿ(TMC) ಪಕ್ಷದಿಂದ ಸ್ಪರ್ಧಿಸಿದ್ದ ಯೂಸುಫ್, ತಮ್ಮ ಚೊಚ್ಚಲ ಪ್ರಯತ್ನದಲ್ಲೇ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ 5 ಬಾರಿಯ ಸಂಸದರಾಗಿದ್ದ ಅಧೀರ್ ರಂಜನ್ ಚೌಧರಿ(Adhir Chowdhury)ಯನ್ನು ಮಣಿಸಿದ್ದರು. ಯೂಸುಫ್ ಪಠಾಣ್ 5,18,066 ಮತಗಳನ್ನು ಪಡೆದರೆ, ತಮ್ಮ ಸಮೀಪದ ಪ್ರತಿಸ್ಪರ್ಧಿ ರಂಜನ್ ಚೌಧರಿ 4,32,340 ಮತಗಳನ್ನು ಮಾತ್ರ ಪಡೆದಿದ್ದರು. ಪಠಾಣ್ 85,726 ಮತಗಳ ಅಂತರದಿಂದ ಗೆದ್ದು ಬೀಗಿದ್ದರು.




