ಭಾರೀ ಮಳೆಗೆ ಕುಸಿದ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ
ಸಕಲೇಶಪುರ: ಹಾಸನ-ಬಂಟ್ವಾಳ ನಡುವೆ ನಡೆಯುತ್ತಿರುವ ಬೆಂಗಳೂರು-ಮಂಗಳೂರು ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ತಾಲ್ಲೂಕಿನ ಆನೆಮಹಲ್ ಗ್ರಾಮದಲ್ಲಿ ಗುರುವಾರ ಸುರಿದ ಒಂದೇ ಮಳೆಗೆ ಕುಸಿದಿದೆ.
ಸಕಲೇಶಪುರ ಬೈಪಾಸ್ ಟೋಲ್‌ಗೇಟ್‌ನಿಂದ ಮಾರನಹಳ್ಳಿವರೆಗೆ ಚತುಷ್ಪಥ ಕಾಮಗಾರಿ ಪ್ರಗತಿಯಲ್ಲಿದ್ದು, ಗ್ರಾಮದಲ್ಲಿ ಕಾಂಕ್ರಿಟ್ ರಸ್ತೆಯ ಕೆಳಗೆ ಅಳವಡಿಸಿರುವ ಮೋರಿಯ ಪೈಪ್ ತುಂಡಾಗಿ ರಸ್ತೆಯ ಒಂದು ಬದಿ ಕುಸಿದಿದೆ. ಮತ್ತೊಂದು ಬದಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಲಿಲ್ಲ.
‘ರಸ್ತೆಯ ಕೆಳಭಾಗದಲ್ಲಿ ಅಳವಡಿಸಿರುವ ಚರಂಡಿಯ ಪೈಪುಗಳು ಉತ್ತಮ ಗುಣಮಟ್ಟದಿಂದ ಕೂಡಿಲ್ಲ’ ಎಂದು ಗ್ರಾಮದ ಭಾಸ್ಕರ್, ಹಸೈನಾರ್ ಅವರು ಕಾಮಗಾರಿ ಸಂದರ್ಭದಲ್ಲೇ ಆಕ್ಷೇಪ ವ್ಯಕ್ತಪಡಿಸಿದ್ದರು.
ಆದರೆ, ಗುತ್ತಿಗೆದಾರರು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎಂಜಿನಿಯರ್‌ಗಳು ಅದನ್ನು ಗಂಭೀರವಾಗಿ ಪರಿಗಣಿಸದೆ ಕಳಪೆ ಕಾಮಗಾರಿ ಮಾಡಿದ್ದೇ ಕುಸಿಯಲು ಕಾರಣ’ ಎಂದು ಗ್ರಾಮಸ್ಥರು ತಿಳಿಸಿದರು.