October 18, 2024

ಕೊಡಂಗಾಯಿ: ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

0

ದ. ಕ. ಜಿ.ಪಂ.ಹಿ.ಪ್ರಾ. ಶಾಲೆ ಕೊಡಂಗಾಯಿ ಇದರ 2024-25ನೇ ಸಾಲಿನ ಶೈಕ್ಷಣಿಕ ವರ್ಷದ 1ರಿಂದ 8ನೇ ತರಗತಿ ವರೆಗಿನ ಮಕ್ಕಳಿಗೆ ಹಳೆ ವಿದ್ಯಾರ್ಥಿ ಸಂಘ ಮತ್ತು ಫ್ರೆಂಡ್ಸ್ ಕಾಪುಮಜಲು(ರಿ),ಹಾಗೂ ವಿದ್ಯಾಭಿಮಾನಿಗಳ ಸಹಕಾರದೊಂದಿಗೆ ಉಚಿತ ಬರೆಯುವ ಪುಸ್ತಕ ವಿತರಣೆ ಕಾರ್ಯಕ್ರಮ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಜ| ಕೆ ಎ ಹಮೀದ್ ಮೂರ್ಜೆಬೆಟ್ಟು ಇವರ ಅದ್ಯಕ್ಷತೆಯಲ್ಲಿ ಶಾಲಾ ಮಕ್ಕಳ ಪ್ರಾರ್ಥನೆಯೊಂದಿಗೆ ಜರಗಿತು.
ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಉಮೇಶ್ ಕೆ,ಗ್ರಾಮ ಪಂಚಾಯತ್ ಸದಸ್ಯೆ ರೇಖಾ,ಶಾಲಾ ಸುರಕ್ಷಾ ಸಮಿತಿ ಅಧ್ಯಕ್ಷರಾದ ನಾರಾಯಣ ಭಟ್ ಪಳ್ಳಿಗದ್ದೆ,ಶಿಕ್ಷಣ ತಜ್ಞರಾದ ವಲ್ಲಭ ತಂತ್ರಿಗಳು,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಅಬ್ದುಲ್ ಮಜೀದ್ ಟಿ ಎಂ,ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಕಾರಂತ, ಕೋಶಾಧಿಕಾರಿ ಸುಕೇಶ್ ಕಾಪುಮಜಲು ,ಉಪಾಧ್ಯಕ್ಷ ರಾದ ಪ್ರವೀಣ್, ಎಸ್ ಡಿ ಎಂ ಸಿ ಸದಸ್ಯರುಗಳಾದ ಅಬ್ದುಲ್ ಕುಂಞ,ಇಸ್ಮಾಯಿಲ್ ಶಾಲೆಬಳಿ ಹಾಗೂ ಪೋಷಕರು ಭಾಗವಹಿಸಿ ಮಕ್ಕಳಿಗೆ ಶುಭಹಾರೈಸಿದರು. ಶಿಕ್ಷಕಿಯರಾದ ಚೈತ್ರಾ, ಮೀನಾಕ್ಷಿ ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ
ಶಿಕ್ಷಕಿ ವಾಣಿಶ್ರೀ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ, ಚೈತ್ರಾ ವಂದನೆ ಅರ್ಪಿಸಿದರು.

Leave a Reply

Your email address will not be published. Required fields are marked *

error: Content is protected !!