May 6, 2026

ಊಟ ಮಾಡುತ್ತಿದ್ದಾಗ ಹೃದಯಾಘಾತದಿಂದ ಡಿ ಗ್ರೂಪ್ ನೌಕರ ಸಾವು

0
image_editor_output_image1678874298-1719643525976.jpg

ರಾಮನಗರ: ಊಟ ಮಾಡುವಾಗಲೇ ಹೃದಯಾಘಾತ ಸಂಭವಿಸಿ ಡಿ ಗ್ರೂಪ್ ನೌಕರನೋರ್ವ ದಾರುಣವಾಗಿ ಮೃತಪಟ್ಟ ಘಟನೆ ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದೆ.

ಯೋಗ್ಯಕುಮಾರ್ (45) ಮೃತ ನೌಕರ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿ ಗ್ರೂಪ್ ನೌಕರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನೌಕರ ಇಂದು ಮಧ್ಯಾಹ್ನ ಊಟ ಮಾಡುವ ವೇಳೆ ಏಕಾಏಕಿ ಕುಸಿದು ಬಿದ್ದು ಸಾವನಪ್ಪಿದ್ದು, ಕುಸಿದು ಬೀಳುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ರೂ ಚಿಕಿತ್ಸೆಗೆ ಫಲಿಸದೇ ಯೋಗ್ಯಕುಮಾರ್ ಸಾವನಪ್ಪಿದ್ದಾರೆ.

Leave a Reply

Your email address will not be published. Required fields are marked *

error: Content is protected !!