March 17, 2026

ಶಿವಮೊಗ್ಗ: ಆ್ಯಂಬುಲೆನ್ಸ್ ಢಿಕ್ಕಿ: ಬೈಕ್ ನಲ್ಲಿದ್ದ ಮೂವರು ಯುವಕರು ಸಾವು

0
image_editor_output_image-306051804-1719645036148.jpg

ಶಿವಮೊಗ್ಗ: ಆ್ಯಂಬುಲೆನ್ಸ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿದ್ದ ಮೂವರು ಯುವಕರು ಸಾವನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಬಳಿ ನಡೆದಿದೆ.

ಶುಕ್ರವಾರ ಮಧ್ಯರಾತ್ರಿ ಘಟನೆ ನಡೆದಿದೆ. ಅಂಬುಲೆನ್ಸ್ ಶಿವಮೊಗ್ಗದಿಂದ ಹಾವೇರಿ ಕಡೆ ತೆರಳುತ್ತಿತ್ತು. ಬೈಕ್ ಶಿಕಾರಿಪುರದಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭ ಅಪಘಾತವುಂಟಾಗಿದೆ.

ಮೃತರನ್ನು ಪ್ರಸನ್ನ (25), ಕಾರ್ತಿಕ್ (27), ಅಜಯ್ (25) ಎಂದು ಗುರುತಿಸಲಾಗಿದೆ. ಮೃತರು ಹೊಸ ಜೋಗದ ನಿವಾಸಿಗಳು ಎನ್ನಲಾಗಿದೆ. ಸ್ಥಳಕ್ಕೆ ಶಿಕಾರಿಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!