ಬಡ್ಡಿ ವ್ಯವಹಾರದಿಂದ ವಿಪರೀತ ಸಾಲ: ವ್ಯಕ್ತಿ ಆತ್ಮಹತ್ಯೆ
ಬೆಂಗಳೂರು: ಬಡ್ಡಿ ವ್ಯವಹಾರದ ಕಾಟದಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದೊಡ್ಡಬಳ್ಳಾಪುರ ನಗರದ ರೋಜಿಪುರದಲ್ಲಿ ನಡೆದಿದೆ.
ಸಾಲಗಾರರ ಕಿರುಕುಳಕ್ಕೆ ಬೇಸತ್ತು ವಿಷಸೇವಿಸಿ ಪರ್ವೀಜ್ ಪಾಷಾ(38) ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದಾನೆ.
ವೃತ್ತಿಯಲ್ಲಿ ಮೆಕ್ಯಾನಿಕ್ ಕೆಲಸ ಮಾಡಿಕೊಂಡಿದ್ದ ಮೃತ ಪರ್ವೀಜ್, ಹಲವರಿಂದ ಬಡ್ಡಿಗೆ ಸಾಲವಾಗಿ ಹಣ ಪಡೆದಿದ್ದ.
ಇದೀಗ ಸಾಲಗಾರರ ನಿರಂತರ ಕಿರುಕುಳದಿಂದ ಬೇಸತ್ತು ಮನೆಯಲ್ಲಿ ವಿಷಸೇವಿಸಿ ಕೊನೆಯುಸಿರೆಳೆದಿದ್ದಾರೆ. ಈ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.