ಟೈರ್ ಬ್ಲಾಸ್ಟ್ ಆಗಿ ಕಾರು ಪಲ್ಟಿ
ಕೊಪ್ಪಳ: ಕಾರೊಂದು ಟೈರ್ ಬ್ಲಾಸ್ಟ್ ಆಗಿ ಪಲ್ಟಿ ಹೊಡೆದಿದೆ. ಕೊಪ್ಪಳದ ಬಸಾಪುರ ದಿಬ್ಬ ಬೈಪಾಸ್ ಹೆದ್ದಾರಿ 67ರಲ್ಲಿ ಈ ದುರ್ಘಟನೆ ಸಂಭವಿಸಿದೆ.
ಕಾರು ಕೊಪ್ಪಳ ಕಡೆಯಿಂದ ಹೊಸಪೇಟೆ ಕಡೆಗೆ ಹೊರಟಿತ್ತು. ಈ ವೇಳೆ ಟೈರ್ ಬ್ಲಾಸ್ಟ್ ಆಗಿದೆ. ಪರಿಣಾಮ ಚಾಲಕನ ಕಂಟ್ರೋಲ್ ತಪ್ಪಿ ಕಾರು ಪಲ್ಟಿಯಾಗಿದೆ.
ಕಾರಿನಲ್ಲಿದ್ದ ನಾಲ್ಕು ಜನರಿಗೆ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ನಿನ್ನೆ ಸಂಜೆ ನಡೆದಿರುವ ಘಟನೆ ಇದಾಗಿದ್ದು, ಪೊಲೀಸರು ಮಾಹಿತಿ ನೀಡಿದ್ದಾರೆ. ಕಾರಿನಲ್ಲಿದ್ದ ನಾಲ್ಕು ಜನರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.




