May 6, 2026

ಡೆಂಗ್ಯೂ ಜ್ವರದಿಂದ ಯುವತಿ ಮೃತ್ಯು

0
image_editor_output_image-930989690-1719899604853.jpg

ಹಾಸನ: ಬಾಲಕಿಯೋರ್ವಳು ಡೆಂಗ್ಯೂ ಜ್ವರದಿಂದ ಮೃತಪಟ್ಟ ಘಟನೆ ಹಾಸನ ಬೊಮ್ಮನಾಯಕಹಳ್ಳಿ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಮೃತಪಟ್ಟ ಬಾಲಕಿ ಅಕ್ಷತಾ (13) ಎಂದು ಗುರುತಿಸಲಾಗಿದೆ.

ಅಕ್ಷತಾ ಮೂಲತಃ ಅರಕಲಗೂಡು ತಾಲ್ಲೂಕಿನ ದೊಡ್ಡಮಗ್ಗೆ ಗ್ರಾಮದವರು. ಕೂಲಿ ಕೆಲಸ ಮಾಡುತ್ತಿದ್ದ ಅಪ್ಪಣ್ಣ ಶೆಟ್ಟಿ ಹಾಗೂ ಪದ್ಮಾ ದಂಪತಿ ಪುತ್ರಿ ಅಕ್ಷತಾ, ಹಾಸನದ ಖಾಸಗಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದರು.

ಕಳೆದ ಬುಧವಾರ ಜ್ವರಕ್ಕೆ ತುತ್ತಾಗಿದ್ದರು. ನಂತರ ಬಾಲಕಿಗೆ ಬೊಮ್ಮನಾಯಕಹಳ್ಳಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗಿತ್ತು. ಆದಾಗ್ಯೂ ಬಾಲಕಿ ಗುಣಮುಖಳಾಗದೇ ಇದ್ದ ಕಾರಣ ಪೋಷಕರು ಆಕೆಯನ್ನ ಹಾಸನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೂ ಅಕ್ಷತಾ ಆರೋಗ್ಯದಲ್ಲಿ ಚೇತರಿಕೆ ಕಾಣದೇ ಮತ್ತೊಂದು ಆಸ್ಪತ್ರೆಗೆ ದಾಖಲಿಸಿದ್ದರು.

Leave a Reply

Your email address will not be published. Required fields are marked *

error: Content is protected !!