ಉಳ್ಳಾಲ: ಟಿಪ್ಪರ್, ಸ್ಕೂಟರ್ ನಡುವೆ ಅಪಘಾತ: ಸ್ಕೂಟರ್ ಸವಾರ ಮೃತ್ಯು
ಉಳ್ಳಾಲ: ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸ್ಕೂಟರ್ ಸವಾರ ಮೃತಪಟ್ಟಿದ್ದಾರೆ.
ಪಾವೂರು ಮಲಾರು ಅಕ್ಷರನಗರ ನಿವಾಸಿ ವಿಶ್ವನಾಥ್ ಆಚಾರ್ಯ ಎಂಬವರ ಪುತ್ರ ಗಣೇಶ್ ಆಚಾರ್ಯ ( 27) ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಫಸ್ಟ್ ನ್ಯುರೋ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.




