March 17, 2026

ರಾಜೀನಾಮೆಗೆ ಸಿಎಂ ಮನೆಗೆ ಮುತ್ತಿಗೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಲವರ ವಶಕ್ಕೆ

0
image_editor_output_image-315513563-1719993777646.jpg

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಸಂಬಂಧ ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹಿಸಿ ಮತ್ತು ಮೈಸೂರಿನ ಮೂಡಾ ಅವ್ಯವಹಾರ ಖಂಡಿಸಿ ಸಿಎಂ ಮನೆಗೆ ಮುತ್ತಿಗೆ ಹಾಕಲು ಕುಮಾರಕೃಪಾ ವಸತಿ ಗೃಹದಿಂದ ಹೊರಟ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ಜನಪ್ರತಿನಿಧಿಗಳನ್ನು ಪೊಲೀಸರು ವಶಕ್ಕೆ ಪಡೆದರು.

ವಿಜಯೇಂದ್ರ ಹಾಗೂ ವಿಧಾನಸಭಾ ವಿರೋಧ ಪಕ್ಷದ ನಾಯಕ ಆ‌ರ್. ಅಶೋಕ ಅವರ ನೇತೃತ್ವದಲ್ಲಿ ಬೆಳಿಗ್ಗೆ ಕುಮಾರಕೃಪಾ ವಸತಿ ಗೃಹದಿಂದ ಕಾಲ್ನಡಿಗೆ ಮೂಲಕ ಹೊರಟು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಗೆ ಮುತ್ತಿಗೆ ಹಾಕಲು ಸಿದ್ಧತೆ ನಡೆಸಲಾಗಿತ್ತು. ಪಾದಯಾತ್ರೆ ಮೂಲಕ ಎಲ್ಲರೂ ಮುಂದುವರಿಯುತ್ತಿದ್ದಂತೆ ತಡೆದ ಪೊಲೀಸರು ಎಲ್ಲರನ್ನು ವಶಕ್ಕೆ ಪಡೆದರು.

ಇದೇ ವೇಳೆ ಬಿಜೆಪಿ ಮುಖಂಡರು ಮತ್ತು ಪೊಲೀಸ್‌ ಅಧಿಕಾರಿಗಳ ನಡುವೆ ಮಾತಿನ ಚಕಮಕಿಯೂ ನಡೆಯಿತು. ಹಲವು ಜನಪ್ರತಿನಿಧಿಗಳನ್ನು ಪೊಲೀಸರು ವಶಕ್ಕೆ ಪಡೆದು, ನಂತರ ಬಿಡುಗಡೆ ಮಾಡಿದರು.

Leave a Reply

Your email address will not be published. Required fields are marked *

You may have missed

error: Content is protected !!