ಮಂಗಳೂರು: ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ ಕಾರ್ಮಿಕರು
ಮಂಗಳೂರು: ಗುಡ್ಡ ಕುಸಿದು ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಘಟನೆ ನಗರದ ಬಲ್ಮಠ ರೋಡ್ ಸಮೀಪ ನಡೆದಿದೆ.
ಕಟ್ಟಡ ನಿರ್ಮಾಣದ ವೇಳೆ ಘಟನೆ ನಡೆದಿದ್ದು, ಮಣ್ಣಿನಡಿ ಸಿಲುಕಿರುವ ಕಾರ್ಮಿಕರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.




