March 17, 2026

ಬೆಳ್ತಂಗಡಿ: ವಿಷ ಸೇವಿಸಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

0
image_editor_output_image-425304921-1720072220023.jpg

ಬೆಳ್ತಂಗಡಿ: ವಿಷ ಸೇವನೆ ಮಾಡಿ ಕಾಲೇಜ್ ವಿದ್ಯಾರ್ಥೀನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ.

ಪುದುವೆಟ್ಟು ಗ್ರಾಮದ ಕಲ್ಲಾಜೆ ನಿವಾಸಿ ವೆಂಕಟೇಶ್ ಅವರ ಪುತ್ರಿ ಅನಿತಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ.

ಈಕೆ ನಾಲ್ಕು ದಿನದ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿ ತೀವ್ರ ಅಸ್ವಸ್ಥಗೊಂಡಿದ್ದಳು. ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅಲ್ಲಿ 3 ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ ಅನಿತಾ ಬುಧವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಈಕೆ ಪ್ರಸ್ತುತ ಬೆಳ್ತಂಗಡಿಯ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಳು.

Leave a Reply

Your email address will not be published. Required fields are marked *

You may have missed

error: Content is protected !!