June 26, 2026

ಬೆಳ್ತಂಗಡಿ: ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ: ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್

0
image_editor_output_image-569562254-1720127631838.jpg

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಪಾಂಗಳದ ವಿದ್ಯಾರ್ಥಿನಿ ಸೌಜನ್ಯಾ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಕೋರಿದ ಹಾಗೂ ಸಿಬಿಐ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ.

ಸೌಜನ್ಯಾಳ ತಂದೆ ಚಂದಪ್ಪ ಗೌಡ, ಖುಲಾಸೆಗೊಂಡಿರುವ ಆರೋಪಿ ಕಾರ್ಕಳ ತಾಲ್ಲೂಕಿನ ಕುಕುಂದೂರಿನ ಸಂತೋಷ್ ರಾವ್‌ ಹಾಗೂ ಸಿಬಿಐ ಪ್ರತ್ಯೇಕವಾಗಿ ಸಲ್ಲಿಸಿದ್ದ ಮೂರು ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ಜೆ.ಎಂ. ಖಾಜಿ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ಮುಕ್ತಾಯಗೊಳಿಸಿತು.

Leave a Reply

Your email address will not be published. Required fields are marked *

error: Content is protected !!