May 6, 2026

ಸಂಸದ ಕೋಟ ವಿರುದ್ಧದ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್‌ ತಡೆ

0
image_editor_output_image-413523450-1720251026580.jpg

ಉಡುಪಿ : ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯ ವಿರುದ್ಧದ ಪ್ರಕರಣವೊಂದಕ್ಕೆ ಕರ್ನಾಟಕ ಹೈಕೋರ್ಟ್‌ ತಡೆ ನೀಡಿದೆ.

ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿನ ಖಾಸಗಿ ಕಾಲೇಜೊಂದರ ಆವರಣದಲ್ಲಿ ಕಾರ್ಯಕ್ರಮ ನಡೆಸಿ “ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಮಕ್ಕಳಿಗೆ ಹಲವು ಉಚಿತ ಯೋಜನೆ ಜಾರಿಗೊಳಿಸುವುದಾಗಿ ಹೇಳಿದ್ದರು.

ಈ ಹೇಳಿಕೆ ಚುನಾವಣಾ ನೀತಿ ಸಂಹಿತೆಗೆ ವಿರುದ್ದ ಎಂದು ಕೋಟ ಶ್ರೀನಿವಾಸ್‌ ಪೂಜಾರಿ ಮತ್ತು ಇತರ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ದಾಖಲಾಗಿರುವ ಈ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.

Leave a Reply

Your email address will not be published. Required fields are marked *

error: Content is protected !!